ಮಂಗಳೂರು: ರಾಜ್ಯದಲ್ಲಿ ಗೃಹಲಕ್ಷ್ಮೀ ಯೋಜನೆ ಮೂಲಕ ದೊಡ್ಡ ಮಟ್ಟದಲ್ಲಿ ಮತವನ್ನು ಸರಕಾರ ಪಡೆದುಕೊಂಡಿದೆ. ಆದರೆ ಇಂದು ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಟೀಕೆಗಳು ಬರತೊಡಗಿವೆ. ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಪ್ರಸ್ತುತ ಸರಕಾರವನ್ನು ಮುನ್ನಡೆಸುತ್ತಿರುವ ಸಿಎಂ ಡಿಕೆ ಶಿವಕುಮಾರ್ ಇಬ್ಬರೂ ಸಂಪೂರ್ಣ ಆಡಳಿತ ವೈಫಲ್ಯವನ್ನು ಅನುಭವಿಸಿದ್ದಾರೆ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರ ಸಚಿವ ಸಂಪುಟದ ಸಚಿವರೇ ಇಂದು ಸರಕಾರವನ್ನು ಟೀಕೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಅವರ ಹೇಳಿಕೆಗಳನ್ನು ನೀಡಿದರೆ ಇವರಿಬ್ಬರೂ ಏನೂ ಕೆಲಸ ಮಾಡಿಲ್ಲ ಎಂಬಂತೆ ಕಾಣುತ್ತಿದೆ.
ಗೃಹ ಲಕ್ಷ್ಮೀ ಗ್ಯಾರಂಟಿ ಅನುಷ್ಠಾನ ಸಮಿತಿ ಮಾಡಿದ್ದು, ಅಧಿಕಾರಿಗಳ ಮೇಲೆ ವಿಶ್ವಾಸ ಇಲ್ಲದ ಇವರು ಅನುಷ್ಠಾನದ ಗ್ಯಾರಂಟಿ ಯೋಜನೆ ಸಮಿತಿ ಮಾಡುವಾಗ ಕೇವಲ ಕಾಂಗ್ರೆಸ್ ಕಾರ್ಯಕರ್ತರನ್ನೇ ಮಾಡಿದ್ದಾರೆ. ಇದು ಕೇವಲ ಕಾಂಗ್ರೆಸ್ ಕಾರ್ಯಕರ್ತರಿಗೆ ಸಹಾಯ ಮಾಡಲು ಇದನ್ನು ಮಾಡಿದ್ದಾರೆ ಎನ್ನುವುದು ಸ್ಪಷ್ಟವಾಗುತ್ತಿದೆ. ಇದು ಗೃಹಲಕ್ಷ್ಮೀ ಯೋಜನೆ ವೈಫಲ್ಯ ಕಂಡಿದ್ದರೆ ಅದಕ್ಕೆ ಅನುಷ್ಠಾನ ಸಮಿತಿಯ ಹೊಣೆ ಹೊತ್ತವರು ಕೂಡಾ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.
ಗೃಹಲಕ್ಷ್ಮೀ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠೀಯಲ್ಲಿ ನಾಯಕರಾದ ಪ್ರೇಮಾನಂದ ಶೆಟ್ಟಿ, ತಿಲಕ್ ರಾಜ್ ಮೊದಲಾದವರಿದ್ದರು.
