ಉಡುಪಿ

ಉಡುಪಿ : ಉಡುಪಿ ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತ್ರತ್ವದಲ್ಲಿ ಉತ್ತಮ ಮಳೆಗಾಗಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ ಸಂಪನ್ನ*

 ಉಡುಪಿ ನಗರ ಬಿಜೆಪಿ ವತಿಯಿಂದ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಾಡಿನಾದ್ಯಂತ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಲೋಕಕಲ್ಯಾಣದ ಸಂಕಲ್ಪದೊಂದಿಗೆ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಾನದಲ್ಲಿ ದೇವರಿಗೆ ಸೀಯಾಳ ಅಭಿಷೇಕ ಸೋಮವಾರ ನೆರವೇರಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಕರಾವಳಿ ಜಿಲ್ಲೆ ಸಹಿತ ರಾಜ್ಯದಾದ್ಯಂತ ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆಯಾದ ಹಿನ್ನಲೆಯಲ್ಲಿ  ಬನ್ನಂಜೆ ಮಹಾಲಿಂಗೇಶ್ವರ ದೇವರಿಗೆ ಸೀಯಾಳ ಅಭಿಷೇಕ ನಡೆಸುವ ಸಂಕಲ್ಪ ಮಾಡಿದ್ದು, ಇಂದು ಬೆಳಿಗ್ಗೆಯಿಂದಲೇ ಉಡುಪಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು ಸಂತಸ ತಂದಿದೆ ಎಂದರು.



ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧಕ್ಷರಾದ ದಿನೇಶ್ ಅಮೀನ್, ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಮಾಜಿ ಸದಸ್ಯರಾದ ಅಶೋಕ್ ನಾಯ್ಕ್,   ಮೊದಲಾದವರು ಉಪಸ್ಥಿತರಿದ್ದರು.



image