ಕೊಲ್ಲೂರು: ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ
ಡಾ.ಜಿ.ಪರಮೇಶ್ವರ್ ಅವರು ದಂಪತಿ ಸಮೇತ ಜೂ.28ರ ರವಿವಾರ ಬೆಳಗ್ಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ಪೂಜೆಯ ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಉಪಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ತಗ್ಗರ್ಸೆ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಭಿಲಾಷ್ ಪಿ.ವಿ., ಸುರೇಂದ್ರ ಶೆಟ್ಟಿ, ರಘುರಾಮ್ ದೇವಾಡಿಗ, ಸುಧಾ ಕೆ.. ಧನಾಕ್ಷಿ ಪೂಜಾರಿ, ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.


