
ಚುನಾವಣಾ ಆಯೋಗದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕುರಿತಾಗಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟನಾಯರೊಂದಿಗೆ ಇಂದು ದಿನಾಂಕ 29-06-2026 ರಂದು ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಭೆ ನಡೆಸಿ ಚರ್ಚಿಸಿದರು.
ಶಾಸಕರು ಮಾತನಾಡಿ ನಾಳೆಯಿಂದ ವಿಶೇಷ ಸಮಗ್ರ ಪರಿಷ್ಕರಣೆ ಆರಂಭವಾಗಲಿದೆ ಅಧಿಕಾರಿಗಳು ಮನೆ ಮನೆ ತೆರಳಿದ್ದು ಈ ಸಂದರ್ಭದಲ್ಲಿ ಮತದಾರರಿಗೆ ಬೇಕಾದ ಸರಿಯಾದ ಮಾಹಿತಿ ಕೊಡುವ ಕೆಲಸ ನಮ್ಮಿಂದ ಆಗಬೇಕು ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ಬಿ.ಎಲ್.ಎ - 1 ಸಂದೀಪ್, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಶರಣ್ ಕುಮಾರ್ ಮಟ್ಟು ಉಪಸ್ಥಿತರಿದ್ದರು.