ಮಂಗಳೂರು:ಕರಾವಳಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜುಲೈ 2ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ (IMD) ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಕಾರಣ, ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ (PU) ಕಾಲೇಜುಗಳಿಗೆ ಜುಲೈ 2ರ ಗುರುವಾರದಂದು ರಜೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

