ದಕ್ಷಿಣ ಕನ್ನಡ

Belthangady: ಗುರುವಾಯನಕೆರೆಯ ಸಬ್‌ಸ್ಟೇಷನ್ ಬಳಿ ಅನುಮಾನಾಸ್ಪದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!


ಗುರುವಾಯನಕೆರೆ: ಇಲ್ಲಿನ ಶಕ್ತಿನಗರದಲ್ಲಿರುವ ಏನಾಪೋಯ ಎಲೆಕ್ಟ್ರಿಕ್ ಸಬ್‌ಸ್ಟೇಷನ್ ಸಮೀಪದ ಪೊದೆಯೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೂನ್ 1 ರಂದು ಈ ಘಟನೆ ಬೆಳಕಿಗೆ ಬಂದಿದೆ.

ಪೊದೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಇರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಮೃತ ವ್ಯಕ್ತಿಯನ್ನು ಕಲ್ಲೇರಿ ನಿವಾಸಿ ಮುಸ್ತಾಕ್ ಎಂದು ಶಂಕಿಸಲಾಗಿದೆ.

ಆದರೆ, ಮೃತದೇಹವು ಸಂಪೂರ್ಣವಾಗಿ ಪತ್ತೆಯಾದ ಸ್ಥಿತಿಯ ಹಿನ್ನೆಲೆಯಲ್ಲಿ, ಸಾವಿಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿಯಬೇಕಿದೆ. ಮೃತರ ಅಧಿಕೃತ ಗುರುತು ಹಾಗೂ ಸಾವಿನ ಹಿಂದಿರುವ ರಹಸ್ಯವನ್ನು ಭೇದಿಸಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮರಣೋತ್ತರ ಪರೀಕ್ಷೆಯ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಹೊರಬರಬೇಕಿದೆ.






image