
ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆ ಬುಧವಾರ ಜು.1 ರಂದು ಮಧ್ಯಾಹ್ನ ಸಂಭವಿಸಿದೆ.
ಕಡಿರುದ್ಯಾವರ ಗ್ರಾಮದ ಮಠದ ಬಳಿಯ ಕುಂಭರೋಡಿ ನಿವಾಸಿಗಳಾದ ಕಮಲ ಮತ್ತು ಕರುಣಾಕರ ಪೂಜಾರಿ ದಂಪತಿಯ ಪುತ್ರಿ ನಿಖಿತಾ (19) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದೆ.
ಪೊಲೀಸ್ ದೂರು ದಾಖಲು: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಿಖಿತಾ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
