ದಕ್ಷಿಣ ಕನ್ನಡ

ಪೊಲೀಸರಿಗೆ ಚಳ್ಳೆಹಣ್ಣು ತಿನಿಸಿ ಬುರ್ಖಾ ತೊಟ್ಟು ತಿರುಗುತ್ತಿದ್ದ ಕುಖ್ಯಾತ ರೌಡಿ ‘ಇಮ್ರಾನ್ ಸುರ್ಮೋ’ ಉಳ್ಳಾಲ ಪೊಲೀಸರ ವಶಕ್ಕೆ!



ಮಂಗಳೂರು:

ನ್ಯಾಯಾಲಯಕ್ಕೆ ಹಾಜರಾಗದೆ ಬುರ್ಖಾ ಧರಿಸಿ ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಕೊನೆಗೂ ಉಳ್ಳಾಲ ಠಾಣಾ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಇಮ್ರಾನ್ ಸುರ್ಮೋ ಎಂದು ಗುರುತಿಸಲಾಗಿದೆ.

23ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ:

ಬಂಧಿತ ಇಮ್ರಾನ್ ಸುರ್ಮೋ ಮಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 23ಕ್ಕೂ ಹೆಚ್ಚು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಈತನ ಮೇಲಿರುವ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯವು ಈ ಹಿಂದೆ ಹಲವಾರು ಬಾರಿ ವಾರಂಟ್ ಜಾರಿ ಮಾಡಿತ್ತು. ಆದರೆ, ಕೋರ್ಟ್‌ಗೆ ಹಾಜರಾಗದೆ ಈತ ಸತತವಾಗಿ ತಲೆಮರೆಸಿಕೊಂಡಿದ್ದ.

ಬುರ್ಖಾ ಧರಿಸಿ ಓಡಾಟ!

ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಈತ ಮಹಿಳೆಯರಂತೆ ಬುರ್ಖಾ ಧರಿಸಿ ಓಡಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಸದ್ಯ ಆರೋಪಿಯನ್ನು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಈತನ ವಿರುದ್ಧ ಹಲವು ಗಂಭೀರ ಪ್ರಕರಣಗಳು ದಾಖಲಾಗಿವೆ.



image