ಬೆಳ್ತಂಗಡಿ:ಉತ್ತಮ ಶಾಸಕ ಪ್ರಶಸ್ತಿಗೆ ಭಾಜನರಾಗಿರುವ ಬೆಳ್ತಂಗಡಿ ಕ್ಷೇತ್ರದ ಜನಪ್ರಿಯ ಶಾಸಕ ಹರೀಶ್ ಪೂಂಜ ಅವರಿಗೆ ಶ್ರೀ ಕ್ಷೇತ್ರ ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದಲ್ಲಿ ಗೌರವ ಸನ್ಮಾನ ನೆರವೇರಿತು.
ಕ್ಷೇತ್ರದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಶಾಸಕರಿಗೆ ಶಾಲ ಹೊದಿಸಿ, ಫಲ-ಪುಷ್ಪ ನೀಡಿ ಆಶೀರ್ವದಿಸಿದರು. 'ಬೆಸ್ಟ್ ಎಂ.ಎಲ್.ಎ' ಗೌರವಕ್ಕೆ ಪಾತ್ರರಾಗುವ ಮೂಲಕ ಕ್ಷೇತ್ರದ ಹಿರಿಮೆ ಹೆಚ್ಚಿಸಿದ ಹರೀಶ್ ಪೂಂಜ ಅವರ ಜನಪರ ಕೆಲಸಗಳನ್ನು ಈ ವೇಳೆ ಸ್ವಾಮೀಜಿಯವರು ಶ್ಲಾಘಿಸಿದರು.
ಈ ಶುಭ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಹಲವು ಪ್ರಮುಖ ನಾಯಕರು, ಜನಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
