ದಕ್ಷಿಣ ಕನ್ನಡ

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದ ಸಚಿವ ಯು.ಟಿ. ಖಾದರ್

 


ಧರ್ಮಸ್ಥಳ: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಪ್ರಸಿದ್ಧ ಪುಣ್ಯಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ, ಅವರಿಂದ ಆಶೀರ್ವಾದ ಪಡೆದರು.

​ಸಚಿವರ ಭೇಟಿಗೆ ಅತ್ಯಂತ ಪ್ರೀತಿಯಿಂದ ಸ್ಪಂದಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು, ಯು.ಟಿ. ಖಾದರ್ ಅವರನ್ನು ಶಾಲು ಹೊದಿಸಿ ಗೌರವಿಸಿದರು. ಜೊತೆಗೆ ಅವರ ಜನಪರ ಕಾರ್ಯಗಳಿಗೆ ಶುಭ ಹಾರೈಸಿ ಅಭಿನಂದನೆಗಳನ್ನು ಸಲ್ಲಿಸಿದರು.

​ಇದಕ್ಕೂ ಮುನ್ನ, ಸಚಿವರು ಕ್ಷೇತ್ರಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಹೆಗ್ಗಡೆಯವರ ಸಹೋದರರಾದ ಡಿ. ಹರ್ಷೇಂದ್ರ ಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರಿಗೆ ಮಾಲಾರ್ಪಣೆ ಮಾಡುವ ಮೂಲಕ ಧರ್ಮಸ್ಥಳದ ಪರವಾಗಿ ಭವ್ಯ ಸ್ವಾಗತ ಕೋರಲಾಯಿತು.



image