ದಕ್ಷಿಣ ಕನ್ನಡ

ಬೆಳ್ತಂಗಡಿ : ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಿ: ಶಾಸಕ ಹರೀಶ್ ಪೂಂಜ ಮನವಿ



 ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.  

​ಈ ಕುರಿತಂತೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಜುಲೈ 3೦ರಂದು ಭೇಟಿಯಾದ ಶಾಸಕರು, ಕ್ಷೇತ್ರ ವ್ಯಾಪ್ತಿಯ ದೇವಸ್ಥಾನ ಹಾಗೂ ಗರಡಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಆರ್ಥಿಕ ನೆರವು ನೀಡುವಂತೆ ಲಿಖಿತ ಅಭ್ಯರ್ಥನೆ ಸಲ್ಲಿಸಿದರು.  

​₹ 3 ಕೋಟಿ ವೆಚ್ಚದ ಯೋಜನೆಗೆ ಪ್ರಸ್ತಾವನೆ

​ಕ್ಷೇತ್ರದ ಒಟ್ಟು ನಾಲ್ಕು ಪ್ರಮುಖ ಧಾರ್ಮಿಕ ಕೇಂದ್ರಗಳ ಪುನರುತ್ಥಾನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗಾಗಿ ಒಟ್ಟು ₹3 ಕೋಟಿ ಅನುದಾನ ಒದಗಿಸುವಂತೆ ಮನವಿಯಲ್ಲಿ ಕೋರಲಾಗಿದೆ.  

​ಅನುದಾನ ಕೋರಿರುವ ಪ್ರಮುಖ ಕ್ಷೇತ್ರಗಳು:  

​ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ: ₹1 ಕೋಟಿ  

​ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ: ₹1 ಕೋಟಿ  

​ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ: ₹5೦ ಲಕ್ಷ

​ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ: ₹5೦ ಲಕ್ಷ

​ಈ ಧಾರ್ಮಿಕ ಕೇಂದ್ರಗಳಿಗೆ ಪ್ರತಿನಿತ್ಯ ಅಪಾರ ಸಂಖ್ಯೆಯ ಭಕ್ತಾದಿಗಳು ಆಗಮಿಸುತ್ತಿದ್ದು, ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಉಪಮುಖ್ಯಮಂತ್ರಿಗಳು ಶೀಘ್ರವೇ ಅನುದಾನ ಬಿಡುಗಡೆಗೊಳಿಸಬೇಕೆಂದು ಶಾಸಕ ಪೂಂಜ ವಿನಂತಿಸಿದ್ದಾರೆ.



image