ದಕ್ಷಿಣ ಕನ್ನಡ

ಬೆಳ್ತಂಗಡಿ: ಲಾಯಿಲ ಬಳಿ ಭೀಕರ ಬೈಕ್ ಅಪಘಾತ – ಕನ್ಯಾಡಿಯ ಯುವಕನಿಗೆ ಗಂಭೀರ ಗಾಯ, ಮಂಗಳೂರಿಗೆ ರವಾನೆ

 


ಬೆಳ್ತಂಗಡಿ: ತಾಲೂಕಿನ ಲಾಯಿಲದ ಪ್ರಸನ್ನ ಕಾಲೇಜು ಸಮೀಪ ಇಂದು ಎರಡು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ.

​ಅಪಘಾತದಲ್ಲಿ ಕನ್ಯಾಡಿ ನಿವಾಸಿ ಅಭಿ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಅವರಿಗೆ ತೀವ್ರ ಸ್ವರೂಪದ ಪೆಟ್ಟಾಗಿದ್ದು, ತಕ್ಷಣವೇ ಸಾರ್ವಜನಿಕರು ಮತ್ತು ಸ್ಥಳೀಯರು ಆಂಬುಲೆನ್ಸ್ ವ್ಯವಸ್ಥೆ ಮಾಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

​ಅಪಘಾತಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನುಷ್ಟೇ ತಿಳಿದುಬರಬೇಕಿದೆ.



image