ದಕ್ಷಿಣ ಕನ್ನಡ

ವಿಟ್ಲ: ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಟಿಪ್ಪರ್; ಇಬ್ಬರಿಗೆ ಗಂಭೀರ ಗಾಯ

 


ವಿಟ್ಲ: ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರಕ್ಕೆ ಭೀಕರವಾಗಿ ಢಿಕ್ಕಿ ಹೊಡೆದ ಘಟನೆ ಉಕ್ಕುಡ ಸಮೀಪದ ದರ್ಬೆ ಎಂಬಲ್ಲಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

​ಪುತ್ತೂರು ಮೂಲದ ದಿನೇಶ್ ಹಾಗೂ ಅಂಕಿತ್ ಗಾಯಗೊಂಡ ದುರ್ದೈವಿಗಳು ಎನ್ನಲಾಗಿದೆ. ಚಾಲನೆಯ ಮೇಲಿನ ನಿಯಂತ್ರಣ ತಪ್ಪಿದ್ದೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ಮುಂಭಾಗ ಜಖಂಗೊಂಡಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

​ವಿಷಯ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



image