ದೇಶ

ನವದೆಹಲಿ : ನೀಟ್ ಪೇಪರ್ ಲೀಕ್ ಕಾವಾಡುವಿಕೆ: ರಾಜೀನಾಮೆ ನೀಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್!

 


ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಈಗ ಕೇಂದ್ರ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದ್ಯಾರ್ಥಿ ಸಂಘಟನೆಗಳು ಮತ್ತು ವಿಪಕ್ಷಗಳ ತೀವ್ರ ಪ್ರತಿಭಟನೆ ಹಾಗೂ ಜನಾಕ್ರೋಶಕ್ಕೆ ಮಣಿದಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ಸಲ್ಲಿ ಸಿದ್ದಾರೆ.

​ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಹೋರಾಟಗಳು ನಡೆದಿದ್ದವು. ಪರೀಕ್ಷಾ ಅಕ್ರಮದ ಹೊಣೆ ಹೊತ್ತು ಶಿಕ್ಷಣ ಸಚಿವರು ತಕ್ಷಣವೇ ಹುದ್ದೆಯಿಂದ ಕೆಳಗಿಳಿಯಬೇಕೆಂದು ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರು ಒತ್ತಾಯಿಸುತ್ತಿದ್ದರು. ಈ ನಿರಂತರ ಹೋರಾಟಗಳ ಬೆನ್ನಲ್ಲೇ ಸಚಿವರ ರಾಜೀನಾಮೆ ಪರ್ವ ನಡೆದಿದೆ.

​ಎನ್‌ಟಿಎ ಸುಧಾರಣೆಗೆ ಕ್ರಮ:

​ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಬೆಳೆಯುತ್ತಿದ್ದಂತೆ ಎಚ್ಚೆತ್ತುಕೊಂಡಿದ್ದ ಕೇಂದ್ರ ಸರ್ಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವ್ಯವಸ್ಥೆಯಲ್ಲಿ ಹಲವು ಪ್ರಮುಖ ಆಡಳಿತಾತ್ಮಕ ಬದಲಾವಣೆಗಳನ್ನು ತರಲು ಮುಂದಾಗಿತ್ತು. ಪರೀಕ್ಷಾ ಪ್ರಕ್ರಿಯೆಯನ್ನು ಸರಿಪಡಿಸಲು ಸುಧಾರಣಾ ಕ್ರಮಗಳನ್ನು ಪ್ರಕಟಿಸಿದ ಬೆನ್ನಲ್ಲೇ ಈ ರಾಜೀನಾಮೆ ಬೆಳವಣಿಗೆ ಸಂಭವಿಸಿದೆ.

​ಧರ್ಮೇಂದ್ರ ಪ್ರಧಾನ್ ಅವರ ನಿರ್ಗಮನದಿಂದಾಗಿ ಖಾಲಿಯಾಗಿರುವ ಕೇಂದ್ರ ಶಿಕ್ಷಣ ಸಚಿವಾಲಯದ ಚುಕ್ಕಾಣಿಯನ್ನು ಮುಂದಿನ ದಿನಗಳಲ್ಲಿ ಯಾರು ಹಿಡಿಯಲಿದ್ದಾರೆ ಎಂಬುದರ ಕುರಿತು ಪ್ರಧಾನಿ ಕಾರ್ಯಾಲಯದಿಂದ ಅಧಿಕೃತ ಮಾಹಿತಿ ಹೊರಬೀಳಬೇಕಿದೆ.



image