ದಕ್ಷಿಣ ಕನ್ನಡ

ಧರ್ಮಸ್ಥಳ: ಮಂಜುನಾಥನ ಸನ್ನಿಧಿಗೆ ನಟ ಪ್ರಜ್ವಲ್ ದೇವರಾಜ್ ಭೇಟಿ; ಹೆಗ್ಗಡೆಯವರ ಆಶೀರ್ವಾದ ಪಡೆದ ಡೈನಾಮಿಕ್ ಪ್ರಿನ್ಸ್

 



ಧರ್ಮಸ್ಥಳ:ಕನ್ನಡ ಚಿತ್ರರಂಗದ ಜನಪ್ರಿಯ ನಟ, 'ಡೈನಾಮಿಕ್ ಪ್ರಿನ್ಸ್' ಪ್ರಜ್ವಲ್ ದೇವರಾಜ್ ಅವರು ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

​ಕ್ಷೇತ್ರಕ್ಕೆ ಆಗಮಿಸಿದ ನಟ ಪ್ರಜ್ವಲ್, ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ತದನಂತರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ, ಕೆಲಕಾಲ ಮಾತುಕತೆ ನಡೆಸಿ ಅವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.



image