ದೇಶ

New Delhi:ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಭಾರಿ ಇಳಿಕೆ: ಗ್ರಾಹಕರಿಗೆ ನಿರಾಳ, ಗೃಹಬಳಕೆ ಬೆಲೆಯಲ್ಲಿ ಬದಲಾವಣೆ ಇಲ್ಲ!

ನವದೆಹಲಿ:ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ವಾಣಿಜ್ಯ ಸಿಲಿಂಡರ್ ಬಳಕೆದಾರರಿಗೆ ಕೇಂದ್ರ ಸರ್ಕಾರ ಮತ್ತು ತೈಲ ಕಂಪನಿಗಳು ಭರ್ಜರಿ ಸಿಹಿ ಸುದ್ದಿ ನೀಡಿವೆ. ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸರಬರಾಜಿನ ಮೇಲಿದ್ದ ನಿರ್ಬಂಧಗಳನ್ನು ತೆರವುಗೊಳಿಸಿದ ಬೆನ್ನಲ್ಲೇ, ಬೆಲೆಯಲ್ಲಿಯೂ ಭಾರಿ ಕಡಿತ ಮಾಡಲಾಗಿದೆ. ಇಂದಿನಿಂದಲೇ (ಜುಲೈ 1) ಜಾರಿಗೆ ಬರುವಂತೆ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ದರವನ್ನು ಬರೋಬ್ಬರಿ 183.50 ರೂಪಾಯಿ ಇಳಿಕೆ ಮಾಡಲಾಗಿದೆ.

ಹೊಸ ದರ ಎಷ್ಟು?                                                          ಈ ಬೆಲೆ ಕಡಿತದ ಬಳಿಕ ಹೋಟೆಲ್, ರೆಸ್ಟೋರೆಂಟ್ ಹಾಗೂ ವಾಣಿಜ್ಯ ಉದ್ದೇಶಗಳಿಗೆ ಬಳಸುವ ಸಿಲಿಂಡರ್ ಬೆಲೆಯಲ್ಲಿ ದೊಡ್ಡ ವ್ಯತ್ಯಾಸವಾಗಿದೆ.

ಹಳೇ ದರ: 3,113.50 ರೂ.

ಹೊಸ ದರ: 2,930 ರೂ.

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದರೂ, ಸಾರ್ವಜನಿಕರು ಬಳಸುವ 14.2 ಕೆಜಿಯ ಗೃಹಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ತೈಲ ಕಂಪನಿಗಳು ಮನೆಬಳಕೆಯ ಗ್ಯಾಸ್ ದರವನ್ನು ಯಥಾಸ್ಥಿತಿಯಲ್ಲಿ ಕಾಯ್ದುಕೊಂಡಿವೆ.

ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ಹೋಟೆಲ್ ಮತ್ತು ಆಹಾರ ಉದ್ಯಮ ನಡೆಸುವ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳಿಗೆ ದೊಡ್ಡ ಮಟ್ಟದ ಆರ್ಥಿಕ ಹೊರೆ ತಪ್ಪಿದಂತಾಗಿದೆ.







image