ದಕ್ಷಿಣ ಕನ್ನಡ

Vitla: ತುಳುನಾಡಿನ ಕೃಷಿ ಸಂಸ್ಕೃತಿ ಉಳಿಸಲು ಕೆಸರುಗದ್ದೆ ಕ್ರೀಡಾಕೂಟ ಪೂರಕ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

ವಿಟ್ಲ: ತುಳುನಾಡಿನ ಭವ್ಯ ಕೃಷಿ ಸಂಸ್ಕೃತಿಯೊಳಗೆ ಇಲ್ಲಿನ ಆಚಾರ-ವಿಚಾರಗಳು ಅಡಗಿವೆ. ಇಂತಹ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಮತ್ತು ಉಳಿಸಿ-ಬೆಳೆಸುವ ನಿಟ್ಟಿನಲ್ಲಿ ಕೆಸರುಗದ್ದೆ ಕ್ರೀಡಾಕೂಟಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಅಭಿಪ್ರಾಯಪಟ್ಟರು.ಒಡಿಯೂರು ಶ್ರೀ ಸಂಸ್ಥಾನದ ರಾಜಾಂಗಣದಲ್ಲಿ ಆಗಸ್ಟ್ 8 ರಂದು ಆಯೋಜಿಸಲಾಗಿರುವ ಒಡಿಯೂರು ಸ್ವಾಮೀಜಿ ಜನ್ಮದಿನೋತ್ಸವ, ಗ್ರಾಮೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಭಾನುವಾರ ಬನಾರಿಯಲ್ಲಿ ವಿಶೇಷವಾಗಿ ಹಮ್ಮಿಕೊಳ್ಳಲಾಗಿದ್ದ ‘ಕೆಸರ್‌ದ ಕಂಡೊಡೊಂಜಿ ದಿನ’ (ಕೆಸರುಗದ್ದೆಯಲ್ಲಿ ಒಂದು ದಿನ) ಗ್ರಾಮೀಣ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.ಗಣ್ಯರ ಉಪಸ್ಥಿತಿ:                                           ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಒಡಿಯೂರು ಶ್ರೀಗಳ ಜನ್ಮದಿನೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕನಾಥ ಶೆಟ್ಟಿ ತಾಳಿಪ್ಪಾಡಿಗುತ್ತು, ಪ್ರಧಾನ ಕೋಶಾಧಿಕಾರಿ ಅಶೋಕ್ ಕುಮಾರ್ ಬಿಜೈ, ಉಪಾಧ್ಯಕ್ಷರಾದ ಕೆ.ಎನ್. ವೆಂಕಟ್ರಮಣ ಹೊಳ್ಳ, ಗಣಪತಿ ಭಟ್ ಸೇರಾಜೆ ಹಾಗೂ ಉಪಾಧ್ಯಕ್ಷೆ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.

ಇವರೊಂದಿಗೆ ಸಂಘಟನಾ ಕಾರ್ಯದರ್ಶಿ ಶಶಿಧರ ಶೆಟ್ಟಿ ಜಮ್ಮದಮನೆ, ದೈಹಿಕ ಶಿಕ್ಷಣ ಶಿಕ್ಷಕರಾದ ರವೀಂದ್ರ ಮತ್ತು ದೀಪಕ್ ಎಸ್.ಕೆ., ರಮೇಶ್ ಶೆಟ್ಟಿ ಅನೆಯಾಲಗುತ್ತು, ಶ್ರೀ ಗುರುದೇವ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ರೇಣುಕಾ ಎಸ್. ರೈ ಹಾಗೂ ಒಡಿಯೂರುಶ್ರೀ ವಿ ಸೌ ಸ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾನಂದ ಶೆಟ್ಟಿ ಬಾಕ್ರಬೈಲು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.ಆಮಂತ್ರಣ ಪತ್ರಿಕೆ ಬಿಡುಗಡೆ:                                        ಇದೇ ಸಂದರ್ಭದಲ್ಲಿ ಮುಂಬರುವ ಭವ್ಯ ಗ್ರಾಮೋತ್ಸವದ ಅಧಿಕೃತ ಆಮಂತ್ರಣ ಪತ್ರಿಕೆಯನ್ನು ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು. 

ಸಭಾ ಕಾರ್ಯಕ್ರಮದ ಮುಕ್ತಾಯದ ಬಳಿಕ ಸಾರ್ವಜನಿಕರಿಗಾಗಿ ಕೆಸರುಗದ್ದೆಯಲ್ಲಿ ವಿವಿಧ ಗ್ರಾಮೀಣ ಕ್ರೀಡಾ ಸ್ಪರ್ಧೆಗಳನ್ನು ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಯಶವಂತ ವಿಟ್ಲ ಅವರು ಸ್ವಾಗತಿಸಿದರು. ದೇವಿಪ್ರಸಾದ್ ಶೆಟ್ಟಿ ಬೆಜ್ಜ ಕಾರ್ಯಕ್ರಮ ನಿರೂಪಿಸಿದರೆ, ಮಾತೇಶ ಭಂಡಾರಿ ಅವರು ಕೊನೆಯಲ್ಲಿ ಧನ್ಯವಾದ ಸಮರ್ಪಿಸಿದರು.



image