ದಕ್ಷಿಣ ಕನ್ನಡ

ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ದೌರ್ಭಾಗ್ಯಜನಕ ಸಾವು

 


ಮಂಗಳೂರು: ಶಾಲಾ ಮೈದಾನದಲ್ಲಿ ಸಹಪಾಠಿಗಳೊಂದಿಗೆ ವಾಲಿಬಾಲ್ ಆಟವಾಡುತ್ತಿದ್ದ ಸಂದರ್ಭದಲ್ಲೇ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ದುಃಖದ ಘಟನೆ ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಸಂಭವಿಸಿದೆ.

​ಮೃತ ವಿದ್ಯಾರ್ಥಿಯನ್ನು ಆಟೋ ಚಾಲಕ ಬೊಳ್ಳಾರು ನಿವಾಸಿ ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:

ಬುಧವಾರ ಶಾಲಾ ಬಿಡುವಿನ ವೇಳೆಯಲ್ಲಿ ಲಿಖಿತ್ ತಮ್ಮ ಗೆಳೆಯರೊಂದಿಗೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದರು. ಈ ವೇಳೆ ಅವರು ದಿಢೀರನೆ ಅಸ್ವಸ್ಥಗೊಂಡು ನೆಲಕ್ಕೆ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಶಿಕ್ಷಕರು ಹಾಗೂ ಸಹಪಾಠಿಗಳು ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

​ಮೃತ ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಕಣ್ಣೆದುರೇ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು, ಶಾಲೆಯಲ್ಲಿಯೂ ಶೋಕದ ವಾತಾವರಣ ಆವರಿಸಿದೆ.



image