ದಕ್ಷಿಣ ಕನ್ನಡ

ಪುದುವೆಟ್ಟು : 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ — ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

 


ಪುದುವೆಟ್ಟು: ಇಲ್ಲಿನ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಸಮಿತಿ ಹಾಗೂ ಹಿಂದೂ ಸೇವಾ ಸಮಿತಿ ಪುದುವೆಟ್ಟು ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜಾ ಮಹೋತ್ಸವವು ಶ್ರದ್ಧಾ ಭಕ್ತಿಗಳಿಂದ ಜರುಗಿತು.


​

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜಾ ಅವರು ಭಾಗವಹಿಸಿ, ಶ್ರೀ ದೇವಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

​ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಪದಾಧಿಕಾರಿಗಳು, ಹಿಂದೂ ಸೇವಾ ಸಮಿತಿಯ ಸದಸ್ಯರು, ಸ್ಥಳೀಯ ಪ್ರಮುಖರು ಹಾಗೂ ಅಪಾರ ಸಂಖ್ಯೆಯ ವ್ರತಧಾರಿ ಮಹಿಳೆಯರು ಉಪಸ್ಥಿತರಿದ್ದು ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.



image