ಉಡುಪಿ

ಉಡುಪಿ: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳಾ ಆರೋಪಿ ಕೊನೆಗೂ ಅಂದರ್: ಮಣಿಪಾಲ ಪೊಲೀಸರ ಭರ್ಜರಿ ಕಾರ್ಯಾಚರಣೆ


 

ಉಡುಪಿ: ಕಳೆದ 17 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯೊಬ್ಬಳನ್ನು ಬಂಧಿಸುವಲ್ಲಿ ಮಣಿಪಾಲ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

​ದಾವಣಗೆರೆಯ ಬೇಗೂರು ನಿವಾಸಿ, 42 ವರ್ಷದ ವಾಣಿಶ್ರೀ ಅಲಿಯಾಸ್ ರೇಣುಕಾ ಬಂಧಿತ ಮಹಿಳೆ.

​ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು, ದಾವಣಗೆರೆಯ ಕೆ.ಟಿ.ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ಆಯಸ್ಕಾಂತದಂತೆ ಸೆರೆಹಿಡಿದಿದ್ದಾರೆ.

​ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರವಾನಿಸಲಾಗಿದೆ.



image