ದಕ್ಷಿಣ ಕನ್ನಡ

Belthangady: ಚಿಬಿದ್ರೆ ಬಳಿ ಕಾರು ಡಿಕ್ಕಿಯಾಗಿ ವಿದ್ಯುತ್ ಕಂಬ ಧರಾಶಾಹಿ; ಹಲವು ಗ್ರಾಮಗಳಲ್ಲಿ ಪವರ್ ಕಟ್


ಬೆಳ್ತಂಗಡಿ (ಆಗಸ್ಟ್ 30): ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕಂಬ ಮುರಿದು ಬಿದ್ದು ಸುತ್ತಮುತ್ತಲಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವ ಘಟನೆ ಭಾನುವಾರ ಬೆಳಿಗ್ಗೆ ಚಿಬಿದ್ರೆ ಸಮೀಪ ಸಂಭವಿಸಿದೆ.

​ಸಿಕ್ಕಿರುವ ಮಾಹಿತಿಯ ಪ್ರಕಾರ, ಕಾರು ಕೊಟ್ಟಿಗೆಹಾರ ಭಾಗದಿಂದ ಉಜಿರೆ ಕಡೆಗೆ ಚಲಿಸುತ್ತಿತ್ತು. ಈ ವೇಳೆ ಚಿಬಿದ್ರೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಜೋರಾಗಿ ಢಿಕ್ಕಿ ಹೊಡೆದಿದೆ.

​ಡಿಕ್ಕಿಯ ಭರಕ್ಕೆ ವಿದ್ಯುತ್ ಕಂಬ ನೆಲಸಮಗೊಂಡಿದ್ದು, ಕಾರು ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಂಭೀರ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

​ಘಟನೆಯಿಂದಾಗಿ ಚಿಬಿದ್ರೆ ಹಾಗೂ ಸುತ್ತಮುತ್ತಲಿನ ಪರಿಸರದ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ. ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಕಂಬ ದುರಸ್ತಿ ಹಾಗೂ ವಿದ್ಯುತ್ ಪೂರೈಕೆ ಪುನರಾರಂಭಿಸುವ ಕಾಯಕದಲ್ಲಿ ನಿರತರಾಗಿದ್ದಾರೆ.



image