ಕ್ರೈಂ

ಬೆಳ್ತಂಗಡಿ: ಖಾಸಗಿ ಕಾಲೇಜಿನ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣಿಗೆ ಶರಣು!

 


ಬೆಳ್ತಂಗಡಿ: ತಾಲೂಕಿನ ಗುರುವಾಯನಕೆರೆಯಲ್ಲಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ಖಾಸಗಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

​ಘಟನೆಯ ವಿವರ:

ಜುಲೈ 31ರಂದು ಮಧ್ಯಾಹ್ನ ಈ ದುರಂತ ಸಂಭವಿಸಿದೆ. ಮೃತ ವಿದ್ಯಾರ್ಥಿಯು ತನಗೆ ತೀವ್ರ ಹೊಟ್ಟೆನೋವು ಹಾಗೂ ವಾಂತಿಯಾಗುತ್ತಿದೆ ಎಂದು ಕಾಲೇಜಿನ ಹಾಸ್ಟೆಲ್ ವಾರ್ಡನ್‌ಗೆ ತಿಳಿಸಿ ವಿಶ್ರಾಂತಿ ಪಡೆಯಲು ತೆರಳಿದ್ದ.

​ಸ್ವಲ್ಪ ಸಮಯದ ಬಳಿಕ ವಾರ್ಡನ್ ವಿದ್ಯಾರ್ಥಿಯ ಕೊಠಡಿಗೆ ತೆರಳಿದಾಗ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು. ಅನುಮಾನಗೊಂಡು ಬಾಗಿಲನ್ನು ಬಲವಂತವಾಗಿ ತೆರೆದು ನೋಡಿದಾಗ, ವಿದ್ಯಾರ್ಥಿಯು ಕೊಠಡಿಯೊಳಗೆ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ.

​ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿಯ ಈ ಹಠಾತ್ ನಿರ್ಧಾರಕ್ಕೆ ನಿಖರ ಕಾರಣ ಏನೆಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.




image