ದಕ್ಷಿಣ ಕನ್ನಡ

​ಬೆಳ್ತಂಗಡಿ : ಮಾಲಾಡಿ-ಸೋನಂದೂರು ಬಿಜೆಪಿ ಶಕ್ತಿ ಕೇಂದ್ರದಿಂದ ಶಾಸಕ ಹರೀಶ್ ಪೂಂಜಗೆ ಭವ್ಯ ಗೌರವಾಭಿನಂದನೆ

 


ಬೆಳ್ತಂಗಡಿ: 'ಉತ್ತಮ ಶಾಸಕ' (Best MLA) ಪುರಸ್ಕಾರಕ್ಕೆ ಭಾಜನರಾಗಿರುವ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅವರಿಗೆ ಮಾಲಾಡಿ ಮತ್ತು ಸೋನಂದೂರು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಆತ್ಮೀಯವಾಗಿ ಗೌರವಾಭಿನಂದನೆ ಸಲ್ಲಿಸಲಾಯಿತು.

​ಆಗಸ್ಟ್ 16 ರಂದು ಈ ಪ್ರಶಸ್ತಿಯನ್ನು ಸ್ವೀಕರಿಸಿದ್ದ ಕ್ಷೇತ್ರದ ಶಾಸಕರಿಗೆ, ಶಕ್ತಿ ಕೇಂದ್ರದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೇರವಾಗಿ ಅವರ ಮನೆಗೆ ತೆರಳಿ ಹೂಗುಚ್ಛ ನೀಡಿ ಶುಭ ಹಾರೈಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿರುವ ಅವರ ಸೇವೆಯನ್ನು ಈ ವೇಳೆ ಸ್ಮರಿಸಲಾಯಿತು.

​


ಈ ಅಭಿನಂದನಾ ಕಾರ್ಯಕ್ರಮದಲ್ಲಿ ಮಾಲಾಡಿ ಮತ್ತು ಸೋನಂದೂರು ಶಕ್ತಿ ಕೇಂದ್ರದ ಪ್ರಮುಖ ನಾಯಕರು, ಬಿಜೆಪಿ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಪ್ರಸ್ತುತ ಹಾಗೂ ಮಾಜಿ ಸದಸ್ಯರುಗಳು ಭಾಗವಹಿಸಿದ್ದರು.

​ಅಲ್ಲದೆ, ಸ್ಥಳೀಯ ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಪಕ್ಷದ ವಿವಿಧ ಹಂತದ ಸದಸ್ಯರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಶಾಸಕರಿಗೆ ಬೆಂಬಲ ಸೂಚಿಸಿದರು.












image