ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಸರಕು ಲಾರಿಯೊಂದು ರಸ್ತೆಬದಿ ನಿಲ್ಲಿಸಲಾಗಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದು, ನೇರವಾಗಿ ಅಂಗಡಿಯೊಂದಕ್ಕೆ ನುಗ್ಗಿದ ಭೀಕರ ಘಟನೆ ಇಲ್ಲಿನ ಪಡೀಲ್‌ನಲ್ಲಿ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಲಾರಿ ಪಡೀಲ್ ತಲುಪುತ್ತಿದ್ದಂತೆ ಈ ಅಪಘಾತ ಸಂಭವಿಸಿದೆ. ಲಾರಿಯ ವೇಗಕ್ಕೆ ರಸ್ತೆಬದಿಯಲ್ಲಿ ನಿಲ್ಲಿಸಲಾಗಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ ಸಂಪೂರ್ಣ ಜಖಂಗೊಂಡಿದ್ದು, ಅಂಗಡಿಯ ಮುಂಭಾಗಕ್ಕೂ ವ್ಯಾಪಕ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಘಟನೆ ನಡೆದ ತಕ್ಷಣ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
