ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸ್ಥಳೀಯ ಗ್ರಾಮಸ್ಥರ ದಶಕಗಳ ಬೇಡಿಕೆ ಕೊನೆಗೂ ಈಡೇರಿದೆ. ಶಾಸಕ ಹರೀಶ್ ಪೂಂಜಾ ಅವರ ವಿಶೇಷ ಪ್ರಯತ್ನ ಹಾಗೂ ಮುತುವರ್ಜಿಯಿಂದಾಗಿ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿಗೆ ಚಾಲನೆ ಸಿಕ್ಕಿದೆ.
ರಸ್ತೆ ಶೋಚನೀಯ ಸ್ಥಿತಿಯಲ್ಲಿದ್ದ ಕಾರಣ ಹಲವು ವರ್ಷಗಳಿಂದ ಈ ಭಾಗದ ಜನರು ತೀವ್ರ ಸಂಚಾರ ಸಂಕಟ ಎದುರಿಸುತ್ತಿದ್ದರು. ಇದೀಗ ಅನುದಾನ ಒದಗಿಸುವ ಮೂಲಕ ಸ್ಥಳೀಯರ ಬಹುದಿನಗಳ ಕನಸನ್ನು ನನಸು ಮಾಡಿರುವ ಶಾಸಕ ಹರೀಶ್ ಪೂಂಜಾ ಅವರಿಗೆ ಪೊಂಜಿಲ ಹಾಗೂ ಗರ್ಡಾಡಿ ಗ್ರಾಮಸ್ಥರು ಹೃತ್ಪೂರ್ವಕ ಧನ್ಯವಾದ ಮತ್ತು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

