ಉಡುಪಿ

ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ಖಾಸಗಿ ಸೊಸೈಟಿ ಸಿಇಒ ಸಚಿನ್ ಶೆಟ್ಟಿ ಆತ್ಮಹತ್ಯೆ

 


ಉಡುಪಿ: ನಗರದ ಅಂಬಲಪಾಡಿ ಬಳಿಯ ಅಪಾರ್ಟ್‌ಮೆಂಟ್ ಒಂದರಲ್ಲಿ ಖಾಸಗಿ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಃಖದ ಘಟನೆ ವರದಿಯಾಗಿದೆ.

​ಮೃತರನ್ನು ಉಡುಪಿಯ ಖಾಸಗಿ ಸಂಸ್ಥೆಯೊಂದರಲ್ಲಿ ಸಿಇಒ ಆಗಿ ಸೇವೆ ಸಲ್ಲಿಸುತ್ತಿದ್ದ ಸಚಿನ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಇವರು ಕಳೆದ ನಾಲ್ಕು ವರ್ಷಗಳಿಂದ ಇದೇ ಸೊಸೈಟಿಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

​ಸದ್ಯಕ್ಕೆ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಉಡುಪಿ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



image