ದಕ್ಷಿಣ ಕನ್ನಡ

ವಿಟ್ಲ : ಮಾಣಿಲ ಮುರುವಿನಲ್ಲಿ ಪಿಕಪ್-ಆಕ್ಟಿವಾ ಭೀಕರ ಡಿಕ್ಕಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

 


ವಿಟ್ಲ: ದ್ವಿಚಕ್ರ ವಾಹನ ಮತ್ತು ಪಿಕಪ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ತೀವ್ರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಸಮೀಪದ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ನಡೆದಿದೆ.

​ಮಾಣಿಲ ನಿವಾಸಿಗಳಾದ ಮನ್ವಿತಾ ಹಾಗೂ ಕಾವ್ಯಶ್ರೀ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಆಕ್ಟಿವಾ ಸ್ಕೂಟರ್ ಮತ್ತು ಎದುರಿನಿಂದ ಬಂದ ಪಿಕಪ್ ವಾಹನದ ನಡುವೆ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ.

​ಆಸ್ಪತ್ರೆಗೆ ದಾಖಲು

ಅಪಘಾತದ ತೀವ್ರತೆಗೆ ಆಕ್ಟಿವಾ ಸವಾರೆ ಹಾಗೂ ಹಿಂಬದಿ ಸವಾರೆ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟು ತೀವ್ರ ರಕ್ತಸ್ರಾವವಾಗಿದೆ. ಕೂಡಲೇ ಸ್ಥಳೀಯರು ಧಾವಿಸಿ ಗಾಯಾಳುಗಳನ್ನು ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಪಿಕಪ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

​ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



image