ದಕ್ಷಿಣ ಕನ್ನಡ

ಬೆಳ್ತಂಗಡಿ: ಸಾರ್ವಜನಿಕ ಪ್ರದೇಶದಲ್ಲಿ ಗಾಂಜಾ ಸೇವನೆ; ಯುವಕನ ವಿರುದ್ಧ ಎನ್‌ಡಿಪಿಎಸ್ ಪ್ರಕರಣ ದಾಖಲು

 


ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ ವಸ್ತು (ಗಾಂಜಾ) ಸೇವಿಸಿ ಅಮಲಿನಲ್ಲಿ ತಲಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಠಾಣೆ ಪೊಲೀಸರು ವಶಕ್ಕೆ ಪಡೆದು, ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.

​ಉಜಿರೆ ಗ್ರಾಮದ ಹಳೆಪೇಟೆಯ ವಿನಾಯಕ ನಗರ ನಿವಾಸಿ, ಸೀತಾರಾಮ ಎಂಬುವವರ ಪುತ್ರ ಅರುಣ್ ಕುಮಾರ್ (36) ಬಂಧಿತ ಆರೋಪಿ.

ಘಟನೆಯ ವಿವರ:

ಆಗಸ್ಟ್ 8ರಂದು ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ (PSI) ಆನಂದ ಎಂ. ಹಾಗೂ ಅವರ ತಂಡ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಹಾಗೂ ಅಮಲಿನಲ್ಲಿ ಓಡಾಡುತ್ತಿರುವುದು ಕಂಡುಬಂದಿದೆ. ತಕ್ಷಣ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ಸರಿಯಾಗಿ ಉತ್ತರಿಸಲಾಗದೆ ನಶೆಯಲ್ಲಿ ತೊದಲುತ್ತಿದ್ದನು.

​ಬಳಿಕ ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ, ತಾನು ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ತಕ್ಷಣವೇ ಆತನನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ.

​ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ (NDPS) ಕಾಯಿದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.



image