ಕ್ರೈಂ

ಉಡುಪಿ: ಮುದರಂಗಡಿ ಮಾಜಿ ಗ್ರಾ.ಪಂ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ದುಷ್ಕರ್ಮಿಗಳ ಗುಂಡೇಟಿಗೆ ಬಲಿ

 


ಉಡುಪಿ:ಕಾಂಗ್ರೆಸ್ ಮುಖಂಡ ಹಾಗೂ ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜಾ (ಪ್ರಿನ್ಸ್) ಅವರನ್ನು ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ.

​ಸ್ಥಳೀಯವಾಗಿ ಸಕ್ರಿಯ ರಾಜಕಾರಣದಲ್ಲಿದ್ದ ಡೇವಿಡ್ ಡಿಸೋಜಾ ಅವರು ಹಿಂದೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಜನರ ಗಮನ ಸೆಳೆದಿದ್ದರು. ಈ ಭೀಕರ ಶೂಟೌಟ್ ಪ್ರಕರಣದಿಂದಾಗಿ ಉಡುಪಿ ಸುತ್ತಮುತ್ತಲಿನ ಭಾಗದಲ್ಲಿ ಆತಂಕ ಹಾಗೂ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ತನಿಖೆ ಆರಂಭಿಸಿದ ಪೊಲೀಸರು:

ಈ ಭೀಕರ ಹತ್ಯೆಗೆ ನಿಖರ ಕಾರಣ ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಹಳೆಯ ವೈಯಕ್ತಿಕ ದ್ವೇಷ ಅಥವಾ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿದೆಯೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

​ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಾಕ್ಷ್ಯಾಧಾರಗಳನ್ನು ಕಲೆಹಾಕುತ್ತಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.



image