ಬೆಳ್ತಂಗಡಿ: ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಮುಂಡಾಜೆಯ ಸೈಂಟ್ ಮೆರೀಸ್ ಚರ್ಚ್ ವ್ಯಾಪ್ತಿಯ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಕೃತಿ ವಿಕೋಪದಿಂದ ಉಂಟಾಗಿರುವ ಹಾನಿಯ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದ ಶಾಸಕರು, ತಕ್ಷಣವೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ಜೇಮ್ಸ್ ಪಟೇರಿಯಲ್, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸೆಬಾಸ್ಟಿಯನ್, ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಬಂಗೇರ, ಪ್ರಮುಖರಾದ ಫ್ರಾನ್ಸಿಸ್, ಅಲೆಕ್ಸ್ ಒಜೆ ಹಾಗೂ ವಿನ್ಸೆಂಟ್ ವೈಪಾನ ಮತ್ತಿತರರು ಉಪಸ್ಥಿತರಿದ್ದರು.

