ಬೆಳ್ತಂಗಡಿ: ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದ ನೆರಿಯ ಗ್ರಾಮ ಪಂಚಾಯತ್‌ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮ ಅವರು, ಶನಿವಾರ ಮತ್ತೆ ತಾಯ್ನಾಡಿಗೆ ಮರಳಿದ್ದಾರೆ. ಶಾಸಕ ಹರೀಶ್ ಪೂಂಜಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಮರು ಸೇರ್ಪಡೆಯಾದರು.
ಕಾಂಗ್ರೆಸ್ ತೊರೆದು ಮರಳಿ ಬಿಜೆಪಿಗೆ ಬಂದ ಮರಿಯಮ್ಮ ಅವರನ್ನು ಶಾಸಕ ಹರೀಶ್ ಪೂಂಜಾ ಅವರು ಪಕ್ಷದ ಶಾಲೆಯೊಡನೆ ಬಾಗಿನ ನೀಡಿ, ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ನೆರಿಯ ಶಕ್ತಿಕೇಂದ್ರದ ಅಧ್ಯಕ್ಷ ವಿಶ್ವನಾಥ್, ಹಾಗೂ ಪ್ರಮುಖ ಮುಖಂಡರಾದ ಬಾಬು ಗೌಡ ಸೇರಿದಂತೆ ಹಲವಾರು ನಾಯಕರು ಉಪಸ್ಥಿತರಿದ್ದರು.
