ದಕ್ಷಿಣ ಕನ್ನಡ

ಚಾರ್ಮಾಡಿ : ಪಂಚಲಿಂಗೇಶ್ವರ ದೇಗುಲದಲ್ಲಿ ವರಮಹಾಲಕ್ಷ್ಮಿ ಪೂಜೆ: ಪ್ರಸಾದ ಸ್ವೀಕರಿಸಿದ ಶಾಸಕ ಹರೀಶ್ ಪೂಂಜ



ಚಾರ್ಮಾಡಿ: ಇಲ್ಲಿನ ಪ್ರಸಿದ್ಧ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ಮಾತೃ ಮಂಡಳಿಯ ಜಂಟಿ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಗಳಿಂದ ನೆರವೇರಿಸಲಾಯಿತು.

​ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ಪೂಜಾ ಮಹೋತ್ಸವಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಆಗಮಿಸಿ, ದೇವರಿಗೆ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

​ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಯಶೋಧರ ವಲಸರಿ, ಮಾತೃ ಮಂಡಳಿಯ ಅಧ್ಯಕ್ಷೆ ಚಂದ್ರಾವತಿ ಮೂಲ್ಯ, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಪ್ರಮುಖರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದು, ದೇವರ ಕೃಪೆಗೆ ಪಾತ್ರರಾದರು.



image