ರಾಜ್ಯ

ಬೆಂಗಳೂರು : ರೆಖ್ಯ ಅರಣ್ಯ ಭೂಮಿ ವಿವಾದ: ಸಚಿವ ರಾಮಲಿಂಗಾರೆಡ್ಡಿಗೆ ಶಾಸಕ ಹರೀಶ್ ಪೂಂಜ ನಿಯೋಗದಿಂದ ಮನವಿ

 


ಬೆಂಗಳೂರು:ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಸರ್ವೆ ನಂಬರ್ 69ಕ್ಕೆ ಸಂಬಂಧಿಸಿದಂತೆ ದೀರ್ಘಕಾಲದಿಂದ ಬಾಕಿಯಿರುವ ಅರಣ್ಯ ಭೂಮಿ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ಆಗ್ರಹಿಸಿ ಶಾಸಕ ಹರೀಶ್ ಪೂಂಜ ನೇತೃತ್ವದ ನಿಯೋಗ ಇಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಯಿತು.

​ವಿಧಾನಸೌಧದಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕರು, ರೆಖ್ಯ ಗ್ರಾಮಸ್ಥರು ಎದುರಿಸುತ್ತಿರುವ ಭೂ ಸಮಸ್ಯೆಯ ತೀವ್ರತೆಯನ್ನು ಅವರ ಗಮನಕ್ಕೆ ತಂದರು. ಈ ಭಾಗದ ಜನರಿಗೆ ಎದುರಾಗಿರುವ ತೊಡಕುಗಳನ್ನು ನಿವಾರಿಸಿ, ಶೀಘ್ರದಲ್ಲಿಯೇ ಸೂಕ್ತ ಪರಿಹಾರ ಒದಗಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.

​


ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಹಿರಿಯರು, ಸಂಕಷ್ಟದಲ್ಲಿರುವ ಸ್ಥಳೀಯ ಗ್ರಾಮಸ್ಥರು ಹಾಗೂ ಬಿಜೆಪಿ ಪ್ರಮುಖ ಕಾರ್ಯಕರ್ತರ ನಿಯೋಗ ಶಾಸಕರೊಂದಿಗೆ ಉಪಸ್ಥಿತರಿದ್ದು, ಸಮಸ್ಯೆಯ ಶೀಘ್ರ ಪರಿಹಾರಕ್ಕೆ ಒತ್ತಾಯಿಸಿತು. ನಿಯೋಗದ ಅಹವಾಲು ಆಲಿಸಿದ ಸಚಿವರು, ಸಮಸ್ಯೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.



image