ದಕ್ಷಿಣ ಕನ್ನಡ

ಬೆಳ್ತಂಗಡಿ : ಧರ್ಮಸ್ಥಳ-ಉಜಿರೆ ಮಾರ್ಗದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಕಾರು ಮಧ್ಯೆ ಡಿಕ್ಕಿ, ಚಾಲಕನಿಗೆ ತೀವ್ರ ಗಾಯ



ಬೆಳ್ತಂಗಡಿ: ಧರ್ಮಸ್ಥಳ – ಉಜಿರೆ ರಾಷ್ಟ್ರೀಯ ಹೆದ್ದಾರಿಯ ಮಣ್ಣ ಸಂಕದ ಸಮೀಪ ಶುಕ್ರವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಕಾರು ಚಾಲಕ, ಧರ್ಮಸ್ಥಳ ನಿವಾಸಿ ಅನಂತರಾಮ್ (54) ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

​ಅಪಘಾತದ ಭೀಕರತೆಗೆ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಇದೇ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಓಮ್ನಿ ವಾಹನವೂ ನಿಯಂತ್ರಣ ತಪ್ಪಿ, ಅಪಘಾತಕ್ಕೀಡಾದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

​ಘಟನೆ ನಡೆದ ತಕ್ಷಣವೇ ಸ್ಥಳೀಯರು ತೀವ್ರವಾಗಿ ಗಾಯಗೊಂಡಿದ್ದ ಅನಂತರಾಮ್ ಅವರನ್ನು ರಕ್ಷಿಸಿ, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಅಪಘಾತಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



image