ರಾಜ್ಯ

ಕಡೂರು : ಕಂಸಾಗರದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ವರಮಹಾಲಕ್ಷ್ಮಿ ಪೂಜೆ ಹಾಗೂ ಭಜನೋತ್ಸವ: ಧಾರ್ಮಿಕ ಕಾರ್ಯಕ್ರಮಗಳಿಗೆ ಮುನ್ನಡಿ



ಕಡೂರು: ತಾಲೂಕಿನ ಸರಸ್ವತಿಪುರ ವಲಯದ ಕಂಸಾಗರದ ಶ್ರೀ ಶನೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಕಡೂರು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಡೂರು ಇವುಗಳ ಸಂಯುಕ್ತಾಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ವಿಜೃಂಭಣೆಯ ಭಜನೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

​ಕಾರ್ಯಕ್ರಮವನ್ನು ಶ್ರೀ ಶ್ರೀ ಸಿದ್ದರಾಮದೇಶಿಕೇಂದ್ರ ಮಹಾಸ್ವಾಮಿಯವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ದಿವ್ಯ ಆಶೀರ್ವಚನ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವೈ. ಹೆಚ್. ನೀಲಕಂಠಪ್ಪ ವಹಿಸಿದ್ದರು.

​ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ವೈ. ಎಸ್. ವಿ. ದತ್ತ, "ಧಾರ್ಮಿಕ ಆಚರಣೆಗಳು ಮಾನವನ ಆಧ್ಯಾತ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಜೀವನದ ಪ್ರಮುಖ ಅಂಗಗಳಾಗಿವೆ. ಇವು ವ್ಯಕ್ತಿಯಲ್ಲಿ ಶಿಸ್ತು, ಮನಸ್ಸಿಗೆ ಶಾಂತಿ ಮತ್ತು ಸಮಾಜದಲ್ಲಿ ಒಗ್ಗಟ್ಟು ಮೂಡಿಸಲು ನೆರವಾಗುತ್ತವೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನೂರಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇಡೀ ಸಮಾಜಕ್ಕೆ ಮಾದರಿಯಾಗಿದೆ" ಎಂದು ಶ್ಲಾಘಿಸಿ ಶುಭ ಹಾರೈಸಿದರು.

​ಇದೇ ವೇಳೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಅವರೂ ಕೂಡ ಕಾರ್ಯಕ್ರಮಕ್ಕೆ ಶುಭ ಕೋರಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಅವರು ಸಂಸ್ಥೆಯ ಯೋಜನೆಗಳು ಹಾಗೂ ಭಜನಾ ಪರಿಷತ್ತಿನ ವಿವಿಧ ಕಾರ್ಯಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.



​ಗಣ್ಯರ ಉಪಸ್ಥಿತಿ:

ವೇದಿಕೆಯಲ್ಲಿ ಚಂದ್ರಪ್ಪ ಚನ್ನಾಪುರ, ಪ್ರೇಮ್ ಕುಮಾರ್, ಭಜನಾ ಪರಿಷತ್ ಅಧ್ಯಕ್ಷ ಗಂಗಾಧರ್ ನಾಯ್ಕ್ ಎಂ.ಎಲ್., ಸರಸ್ವತಿಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ. ವಿ. ಆನಂದ್, ಹಾಗೂ ಪ್ರಮುಖರಾದ ಆಶಾ ತಮ್ಮಯ್ಯ, ಜಯಸ್ವಾಮಿ, ಮಹೇಶ್ವರಪ್ಪ, ಶ್ರೀನಿವಾಸ್, ರೇವಣ್ಣ, ಮಂಜಪ್ಪ, ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

​ರೂಪಾ ಮತ್ತು ಸಂಗಡಿಗರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ, ತಾಲೂಕು ಯೋಜನಾಧಿಕಾರಿ ಶ್ರೀಮತಿ ನಾಗವೇಣಿ ಎ. ಜಿ. ಸರ್ವರನ್ನೂ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ನಿರೂಪಣೆ ನಡೆಸಿಕೊಟ್ಟರೆ, ವಲಯ ಮೇಲ್ವಿಚಾರಕಿ ಶ್ರೀಮತಿ ಶಶಿಕಲಾ ಧನ್ಯವಾದ ಸಮರ್ಪಿಸಿದರು.



image