ಪದ್ಮುಂಜ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ನಾಳೆ (ಆಗಸ್ಟ್ 26, ಬುಧವಾರ) ಬೆಳಿಗ್ಗೆ 10:30ಕ್ಕೆ ಸರಿಯಾಗಿ ಸಂಘದ ರೈತ ಸಭಾಭವನದಲ್ಲಿ ಜರುಗಲಿದೆ.
ಇದೇ ಸಂದರ್ಭದಲ್ಲಿ SSLC ಹಾಗೂ PUC ಪರೀಕ್ಷೆಗಳಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸಂಘದ ಸಮಸ್ತ ಸದಸ್ಯರು ನಿಗದಿತ ಸಮಯಕ್ಕೆ ಆಗಮಿಸಿ, ಮಹಾಸಭೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
