ದಕ್ಷಿಣ ಕನ್ನಡ

ಬಂಟ್ವಾಳ : ನರಹರಿ ಪರ್ವತದಲ್ಲಿ ಶ್ರದ್ಧಾ-ಭಕ್ತಿಯ ಆಟಿ ಅಮಾವಾಸ್ಯೆ: ತೀರ್ಥಸ್ನಾನ ಮಾಡಿ ಪುನೀತರಾದ ಸಾವಿರಾರು ಭಕ್ತರು

 


ಬಂಟ್ವಾಳ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರವಾದ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆಯ ಅಂಗವಾಗಿ ಇಂದು ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ತೀರ್ಥಸ್ನಾನ ಶ್ರದ್ಧಾ-ಭಕ್ತಿಯಿಂದ ನೆರವೇರಿದವು.

​ಪವಿತ್ರ ದಿನದ ಹಿನ್ನೆಲೆಯಲ್ಲಿ ಬೆಳಗಿನ ಜಾವದಿಂದಲೇ ದೇವಸ್ಥಾನಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ, ಪರ್ವತದ ಬಂಡೆಗಳ ನಡುವೆ ಇರುವ ಪವಿತ್ರ ಶಂಖ, ಚಕ್ರ, ಗದಾ ಮತ್ತು ಪದ್ಮ ತೀರ್ಥಕುಂಡಗಳಲ್ಲಿ ಭಕ್ತಿಭಾವದಿಂದ ಸ್ನಾನ ಮಾಡಿ ಪುನೀತರಾದರು.


ಇದೇ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಮಹಾಗಣಪತಿ ಹಾಗೂ ಶ್ರೀ ಸದಾಶಿವ ದೇವರಿಗೆ ವಿಶೇಷ ಅಲಂಕಾರ ಪೂಜೆ ಮತ್ತು ಮಹಾಪೂಜೆ ನಡೆಯಿತು. ವರ್ಷದಿಂದ ವರ್ಷಕ್ಕೆ ಆಟಿ ಅಮಾವಾಸ್ಯೆಯಂದು ನರಹರಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಇಂದಿನ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಅಪಾರ ಸಂಖ್ಯೆಯ ಸಾರ್ವಜನಿಕರು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.



image