ಉಡುಪಿ: ಬ್ರಹ್ಮಾವರ ಸಮೀಪ ಚಲಿಸುತ್ತಿದ್ದ ಖಾಸಗಿ ಬಸ್ ಒಂದರಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ.
ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಬಸ್‌ನ ಇಡಿಸಿ (EDC) ಬಾಕ್ಸ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ತಕ್ಷಣವೇ ಎಚ್ಚೆತ್ತ ಚಾಲಕ ಮತ್ತು ನಿರ್ವಾಹಕ, ಬಸ್‌ನಲ್ಲಿದ್ದ ಏಳು ಜನ ಪ್ರಯಾಣಿಕರನ್ನು ತಕ್ಷಣವೇ ಕೆಳಗೆ ಇಳಿಸಿದ್ದಾರೆ. ಸಿಬ್ಬಂದಿಯ ಜಾಣ್ಮೆ ಮತ್ತು ಸಮಯಪ್ರಜ್ಞೆಯಿಂದಾಗಿ ಯಾವುದೇ ಜೀವಹಾನಿ ಸಂಭವಿಸದೆ, ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ, ಸುಡುವ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಬೆಂಕಿಯ ಕೆನ್ನಾಲಗೆಗೆ ಬಸ್ ಸಂಪೂರ್ಣವಾಗಿ ಹಾನಿಗೊಳಗಾಗಿದೆ.


