ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಸಮೀಪದ ಬಂಗೇರಪದವು ಎಂಬಲ್ಲಿ ಕಲ್ಲು ಕ್ವಾರೆಯೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಆಳವಾದ ಗುಂಡಿಗೆ ಬಿದ್ದಿರುವ ಘಟನೆ ನಡೆದಿದೆ.
ಉಡುಪಿ ಮೂಲದ ಈ ಲಾರಿಯು ಕ್ವಾರೆಯಲ್ಲಿದ್ದ ನೀರು ತುಂಬಿದ ಕೋರೆಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ಜಖಂಗೊಂಡಿದೆಯಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ