ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಕರ್ಲಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಾಮ ಮಂದಿರದ ಕಾಮಗಾರಿಗೆ 1,50,000 ರೂಪಾಯಿಗಳ ಆರ್ಥಿಕ ನೆರವು ಮಂಜೂರು ಮಾಡಿದ್ದಾರೆ. ಈ ಮೊತ್ತದ ಡಿಡಿಯನ್ನು (Demand Draft) ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಗಳು ಮಂದಿರ ನಿರ್ಮಾಣ ಸಮಿತಿಯ ಪದಾಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಿದರು.
ಧರ್ಮಸ್ಥಳ ಕ್ಷೇತ್ರದ ಸಾಮಾಜಿಕ ಮತ್ತು ಧಾರ್ಮಿಕ ನವೀಕರಣ ಯೋಜನೆಯಡಿ ಈ ಧನಸಹಾಯ ಲಭಿಸಿದ್ದು, ಹಸ್ತಾಂತರ ಕಾರ್ಯಕ್ರಮದ ವೇಳೆ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗ್ರಾಮದ ಪ್ರಮುಖರು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ಧರ್ಮಸ್ಥಳದ ಈ ಧನಸಹಾಯಕ್ಕೆ ಮಂದಿರ ನಿರ್ಮಾಣ ಸಮಿತಿ ಹಾಗೂ ಕರ್ಲಲ್ಲಿ ಗ್ರಾಮಸ್ಥರು ಪೂಜ್ಯ ಖಾವಂದರಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.