ದಕ್ಷಿಣ ಕನ್ನಡ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 28ನೇ ಭಜನಾ ಕಮ್ಮಟದ ಸಿದ್ಧತೆ ಚುರುಕು: ನೂತನ ಕಚೇರಿ ಉದ್ಘಾಟನೆ



ಧರ್ಮಸ್ಥಳ: ವಿಶ್ವಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 4 ರವರೆಗೆ ಹಮ್ಮಿಕೊಳ್ಳಲಾಗಿರುವ 28ನೇ ವರ್ಷದ 'ಭಜನಾ ಕಮ್ಮಟ'ದ ಸುಗಮ ನಿರ್ವಹಣೆಗೆ ಸಂಬಂಧಿಸಿದಂತೆ ಮಹೋತ್ಸವ ಸಭಾಂಗಣದಲ್ಲಿ ನೂತನ ಕಾರ್ಯಾಲಯವನ್ನು ಶುಕ್ರವಾರ ಅಧಿಕೃತವಾಗಿ ಪ್ರಾರಂಭಿಸಲಾಯಿತು.

​


ಕಾರ್ಯಕ್ರಮದ ಆರಂಭದಲ್ಲಿ ಭಜನಾ ಕಮ್ಮಟದ ರಾಜ್ಯ ಸಂಚಾಲಕರಾದ ಸುಬ್ರಮಣ್ಯ ಪ್ರಸಾದ್ ಅವರು ಶ್ರೀ ಮಂಜುನಾಥ ಸ್ವಾಮಿ, ಚಂದ್ರನಾಥ ಸ್ವಾಮಿ, ಭಗವಾನ್ ಅಣ್ಣಪ್ಪ ಸ್ವಾಮಿ ಹಾಗೂ ಸಮಸ್ತ ಧರ್ಮದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ, ಕಮ್ಮಟವು ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು.

​ಬಳಿಕ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರು, ಕಮ್ಮಟ ಸಮಿತಿಯ ವಿವಿಧ ಪದಾಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

​


ಮುಂದಿನ ಒಂದು ವಾರದ ಕಾಲ ನಡೆಯಲಿರುವ ಈ ಬೃಹತ್ ಕಮ್ಮಟಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ನೂರಾರು ಭಜನಾ ತಂಡಗಳು ಹಾಗೂ ತರಬೇತುದಾರರು ಆಗಮಿಸಲಿದ್ದು, ಕಾರ್ಯಕ್ರಮದ ಸಂಪೂರ್ಣ ಉಸ್ತುವಾರಿಯನ್ನು ಈ ಕಚೇರಿಯ ಮೂಲಕ ನಿರ್ವಹಿಸಲಾಗುತ್ತದೆ.



image