ದಕ್ಷಿಣ ಕನ್ನಡ

ಬೆಳ್ತಂಗಡಿ : ತಾಲೂಕಿನಾದ್ಯಂತ ವಿಜೃಂಭಿಸಿದ ಗಣೇಶೋತ್ಸವ; 50ಕ್ಕೂ ಹೆಚ್ಚು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶಾಸಕ ಹರೀಶ್ ಪೂಂಜ ಭಾಗಿ



ಬೆಳ್ತಂಗಡಿ: ತಾಲೂಕಿನಾದ್ಯಂತ ಭಕ್ತಿ-ಶ್ರದ್ಧೆಯಿಂದ ಜರುಗಿದ ಸಾರ್ವಜನಿಕ ಶ್ರೀ ಗಣೇಶೋತ್ಸವ ಮುಕ್ತಾಯದ ಹಂತಕ್ಕೆ ತಲುಪಿದ್ದು, ಧಾರ್ಮಿಕ ವೈಭವ ಕಳೆಗಟ್ಟಿದೆ. ತಾಲೂಕಿನ ಸುಮಾರು 50ಕ್ಕೂ ಹೆಚ್ಚು ಪ್ರಮುಖ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾದ ಸಾರ್ವಜನಿಕ ಗಣಪತಿ ಪೂಜಾ ಕಾರ್ಯಕ್ರಮಗಳಲ್ಲಿ ಶಾಸಕ ಹರೀಶ್ ಪೂಂಜ ಸಕ್ರಿಯವಾಗಿ ಪಾಲ್ಗೊಂಡರು.

​


ವಿವಿಧ ಸಮಿತಿಗಳ ವತಿಯಿಂದ ಆಯೋಜಿಸಲಾಗಿದ್ದ ಗಣೇಶೋತ್ಸವ ಮಂಟಪಗಳಿಗೆ ಹಿರಿಯ ನಾಯಕರೊಂದಿಗೆ ಭೇಟಿ ನೀಡಿದ ಶಾಸಕರು, ಮಹಾಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಾಡಿನ ಜನತೆಗೆ ಶುಭ ಕೋರಿದ ಅವರು, ಧಾರ್ಮಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಮತ್ತು ಐಕ್ಯತೆಯನ್ನು ಹೆಚ್ಚಿಸುತ್ತವೆ ಎಂದರು.

​


ತಾಲೂಕಿನ ಹಲವೆಡೆ ನಡೆದ ಶೋಭಾ ಯಾತ್ರೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಶಾಸಕರು ಭಾಗವಹಿಸಿ, ಉತ್ಸವ ಸಮಿತಿಗಳ ಪದಾಧಿಕಾರಿಗಳು ಹಾಗೂ ಭಕ್ತಾದಿಗಳನ್ನು ಅಭಿನಂದಿಸಿದರು.



image