ದಕ್ಷಿಣ ಕನ್ನಡ

Bantwal :ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ


​ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದ ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಮುಂಬರುವ ಅಕ್ಟೋಬರ್‌ 11ರಿಂದ 19ರವರೆಗೆ ಅತ್ಯಂತ ವೈಭವದಿಂದ ಜರುಗಲಿರುವ ಶರನ್ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಮಂಗಳವಾರ ಭಕ್ತಿಪೂರ್ವಕವಾಗಿ ಬಿಡುಗಡೆಗೊಳಿಸಲಾಯಿತು.

​ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಶ್ರೀ ದೇವಿಗೆ ವಿಶೇಷ ಪೂಜಾ ಕೈಂಕರ್ಯಗಳು, ಧಾರ್ಮಿಕ ವಿಧಿ-ವಿಧಾನಗಳು ಹಾಗೂ ಪ್ರಾರ್ಥನೆಗಳು ನೆರವೇರಲಿವೆ. ಈ ಧಾರ್ಮಿಕ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಅನ್ನಪೂರ್ಣೇಶ್ವರಿ ಅಮ್ಮನವರ ಹಾಗೂ ಶ್ರೀ ಮಹಾವಿಷ್ಣುವಿನ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ಆಡಳಿತ ಸಮಿತಿ ವಿನಂತಿಸಿದೆ.ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ದೇವಸ್ಥಾನದ ಅರ್ಚಕರಾದ ಸುಧೀರ್ ಭಟ್, ಆಡಳಿತ ಟ್ರಸ್ಟಿ ಹಾಗೂ ಸಂಚಾಲಕರಾದ ಸಂಪತ್ ಕುಮಾರ್ ಶೆಟ್ಟಿ ಮುಂಡ್ರೇಲ್ ಗುತ್ತು, ಆಡಳಿತ ಟ್ರಸ್ಟಿಗಳಾದ ಲಿಂಗಪ್ಪ ಪೂಜಾರಿ ಕೆಂಚನಬೆಟ್ಟು, ಜಯ ನಾಯ್ಕ ನೇಲ್ಯಪಲ್ಕೆ, ಶಿವರಾಮ ಶೆಟ್ಟಿ ಅಂತರದೋಟ, ಪ್ರದೀಪ್ ಪೂಜಾರಿ ಕಟ್ಟದಡೆ, ವಿಶ್ವನಾಥ ‌ಶೆಟ್ಟಿ ಸುಕ್ರೋಡಿ, ಅಶೋಕ್ ರೈ ಕೊಡಿಮಾರು ಹಾಗೂ ಮಹಿಳಾ ಸಮಿತಿಯ ಅಧ್ಯಕ್ಷರಾದ ಜಯಂತಿ ಅಲ್ಲಂಗಾರು ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು, ಮಹಿಳಾ ಸಮಿತಿಯ ಸದಸ್ಯರು ಮತ್ತು ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.



image