ದಕ್ಷಿಣ ಕನ್ನಡ

ಪಾಣಾಜೆ: ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ — ಕೊಲೆ ಅಥವಾ ಆತ್ಮಹತ್ಯೆ? ಪೊಲೀಸರ ತನಿಖೆ ತೀವ್ರ

ಪಾಣಾಜೆ (ದಕ್ಷಿಣ ಕನ್ನಡ): ಸ್ಥಳೀಯ ಕಲ್ಲಪದವು ಪ್ರದೇಶದ ಕೆರೆಯೊಂದರಲ್ಲಿ ವ್ಯಕ್ತಿಯೋರ್ವರ ಮೃತದೇಹ ಶನಿವಾರ ಪತ್ತೆಯಾಗಿದ್ದು, ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

​ಮೃತರನ್ನು ಕಲ್ಲಪದವು ನಿವಾಸಿ ಗಣೇಶ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವ್ಯಕ್ತಿ ಕತ್ತು ಕೊಯ್ದುಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಸಾವಿಗೆ ನಿಖರವಾದ ಕಾರಣ ಏನು ಎಂಬುದು ಪೊಲೀಸರ ಪೂರ್ಣ ಪ್ರಮಾಣದ ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ.

​ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. 



image