ದಕ್ಷಿಣ ಕನ್ನಡ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ನೇಮಕ

IMG 20260910 WA0001

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್. ಪೂಜಾರಿ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತವಾಗಿ ನೇಮಕ ಮಾಡಿದೆ. ಈ ಕುರಿತು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಈ ನೇಮಕಾತಿಯು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

​ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾಗಿರುವ 'ಸಂಘಟನ್ ಸೃಜನ್ ಅಭಿಯಾನ'ದ ಭಾಗವಾಗಿ ಈ ಪ್ರಮುಖ ಬದಲಾವಣೆ ಮಾಡಲಾಗಿದೆ. ಈ ಅಭಿಯಾನದ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ನಿಯೋಜನೆಗೊಂಡಿದ್ದ ಎಐಸಿಸಿ ವಿಶೇಷ ವೀಕ್ಷಕರು (Observers), ಪಕ್ಷದ ಸ್ಥಳೀಯ ಪದಾಧಿಕಾರಿಗಳು, ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರೊಂದಿಗೆ ಸರಣಿ ಸಮಾಲೋಚನೆ ನಡೆಸಿದ್ದರು.

​ಜಿಲ್ಲೆಯ ರಾಜಕೀಯ ಪರಿಸ್ಥಿತಿ ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ವೀಕ್ಷಕರು ಹೈಕಮಾಂಡ್‌ಗೆ ಸಮಗ್ರ ವರದಿ ಸಲ್ಲಿಸಿದ್ದರು. ಈ ವರದಿಯ ಆಧಾರದ ಮೇಲೆ ಎಐಸಿಸಿ ಹಿರಿಯ ನಾಯಕರು ನಡೆಸಿದ ಅಂತಿಮ ಸುತ್ತಿನ ಸಮಾಲೋಚನೆ ಬಳಿಕ, ಪದ್ಮರಾಜ್ ಆರ್. ಪೂಜಾರಿ ಅವರ ನೇಮಕವನ್ನು ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಮುದ್ರೆ ಒತ್ತಿದೆ.



image