ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಕಣಿಯೂರು ವಲಯದ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ಥಳೀಯ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಸ್ವಚ್ಛತಾ ಅಭಿಯಾನ ನಡೆಯಿತು.
ಶ್ರಮದಾನದ ಅಂಗವಾಗಿ ಶಾಲಾ ಆವರಣದಲ್ಲಿದ್ದ ಅಡಿಕೆ ತೋಟ, ಕ್ರೀಡಾಂಗಣ ಹಾಗೂ ಸುತ್ತಮುತ್ತ ಬೆಳೆದಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ, ಶಾಲಾ ಪರಿಸರವನ್ನು ಶುಚಿ ಗೊಳಿಸಲಾಯಿತು.
ಈ ಸಮಾಜಮುಖಿ ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಸುಂದರ ಪೂಜಾರಿ, ಗೌರವಾಧ್ಯಕ್ಷರಾದ ಕೃಷ್ಣಯ್ಯ ಆಚಾರ್ಯ, ಪದಾಧಿಕಾರಿಗಳು, ಸೇವಾ ಪ್ರತಿನಿಧಿ ಚಂದ್ರಕಲಾ, ಒಕ್ಕೂಟದ ಸದಸ್ಯರು ಹಾಗೂ ಶಾಲಾ ವಿದ್ಯಾರ್ಥಿಗಳ ಪೋಷಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಶಾಲೆಯ ಆವರಣವನ್ನು ಸ್ವಚ್ಛಗೊಳಿಸಿ ಮಾದರಿ ಕಾರ್ಯಕ್ಕೆ ಕೈಜೋಡಿಸಿದ ಪ್ರತಿಯೊಬ್ಬರಿಗೂ ಶಾಲಾ ಮುಖ್ಯೋಪಾಧ್ಯಾಯರಾದ ಶೀನಪ್ಪ ಅವರು ಕೃತಜ್ಞತೆ ಸಲ್ಲಿಸಿದರು.
