ದಕ್ಷಿಣ ಕನ್ನಡ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಯುವ ಸಂಸತ್ ಸ್ಪರ್ಧೆ: ಬೆಳಾಲು ಎಸ್‌ಡಿಎಂ ಶಾಲೆಯ ಸೃಜನ್ಯಗೆ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ



ಬೆಳಾಲು: ಯುವ ಜನತೆಯಲ್ಲಿ ಪ್ರಜಾಸತ್ತಾತ್ಮಕ ಚಿಂತನೆ ಹಾಗೂ ಸಂಸದೀಯ ವ್ಯವಸ್ಥೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಇತ್ತೀಚೆಗೆ ಕಲ್ಮಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಜನ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

​ವಿದ್ಯಾರ್ಥಿಗಳಲ್ಲಿ ಜಾಗೃತ ನಾಯಕತ್ವ ಹಾಗೂ ಸಂಸದೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಈ ತಾಲೂಕು ಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ತಮ್ಮ ಅತ್ಯುತ್ತಮ ವಾಗ್ದರಿ ಹಾಗೂ ಪರಿಣಾಮಕಾರಿ ವಿಷಯ ನಿರೂಪಣೆಯ ಮೂಲಕ ಗಮನಸೆಳೆದ ಸೃಜನ್ಯ, ಮುಂಬರುವ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ತಾಲೂಕಿನ ಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.

​ಸಾಧಕ ವಿದ್ಯಾರ್ಥಿನಿಯ ಈ ವಿಶೇಷ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ಶಾಲೆಯ ವಿದ್ಯಾರ್ಥಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿ ಹಾಗೂ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಯಶಸ್ಸು ಸಿಗಲೆಂದು ಶುಭ ಹಾರೈಸಿದ್ದಾರೆ.



image