ದಕ್ಷಿಣ ಕನ್ನಡ

ಉಜಿರೆ : ಉಜಿರೆ ಅನುಗ್ರಹ ಶಾಲೆಯಲ್ಲಿ 'ಸ್ವಚ್ಛತೆ ಮತ್ತು ನೈರ್ಮಲ್ಯ' ಜಾಗೃತಿ ಕಾರ್ಯಕ್ರಮ

 


ಉಜಿರೆ: “ಸ್ವಚ್ಛ ಪರಿಸರವೇ ಆರೋಗ್ಯಕರ ಜೀವನಕ್ಕೆ ಅಡಿಪಾಯ” ಎಂಬ ಸಂದೇಶದೊಂದಿಗೆ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ ಗುರುವಾರ ಯಶಸ್ವಿಯಾಗಿ ನಡೆಯಿತು.

​ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಛ ಭಾರತ್ ಮಿಷನ್ (SBM-G) ವಿಭಾಗದ ಮಾಹಿತಿ, ಶಿಕ್ಷಣ ಮತ್ತು ಸಂವಹನ ತಜ್ಞರಾದ ಶ್ರೀ ಡೊಂಬಯ್ಯ ಇಡ್ಕಿದು ಅವರು, “ಪ್ರತಿಯೊಬ್ಬರೂ ವೈಯಕ್ತಿಕ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ತ್ಯಾಜ್ಯದ ಸೂಕ್ತ ವಿಲೇವಾರಿ ಹಾಗೂ ಪರಿಸರ ಸಂರಕ್ಷಣೆ ಇಂದಿನ ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಿಂದಲೇ ಉತ್ತಮ ಸ್ವಚ್ಛತಾ ಅಭ್ಯಾಸಗಳನ್ನು ಅಳವಡಿಸಿಕೊಂಡು, ತಮ್ಮ ಶಾಲೆ ಮತ್ತು ವಾಸಿಸುವ ಪ್ರದೇಶವನ್ನು ಶುಚಿಯಾಗಿಟ್ಟುಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಇದೇ ವೇಳೆ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಸಂವಾದವೂ ಜರುಗಿತು.

​ಶಾಲೆಯ ಪ್ರಾಂಶುಪಾಲರಾದ ರೆವರೆಂಡ್ ಫಾದರ್ ಡಾ. ವಿಜಯ ಲೋಬೋ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

​ಪ್ರಶಿಕ್ಷಣಾರ್ಥಿಗಳಾದ ವರ್ಷ ಪಿ.ಆರ್. ಸ್ವಾಗತಿಸಿ, ಕೀರ್ತಿ ಅವರು ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ವಿನಿಷ ಅವರು ಕಾರ್ಯಕ್ರಮ ನಿರೂಪಿಸಿದರೆ, ಶ್ರೀ ರಮೇಶ್ ಧನ್ಯವಾದ ಸಮರ್ಪಿಸಿದರು.

​ಕಾರ್ಯಕ್ರಮದಲ್ಲಿ ಶಾಲೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿಕೊಳ್ಳುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.



image