ರಾಜ್ಯ

ರಾಯಚೂರು: ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ದಾರುಣ ಸಾವು


ರಾಯಚೂರು: ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿದ್ದ ಭಕ್ತರ ಮೇಲೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸ್ಥಳದಲ್ಲೇ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದ ಬಳಿ ಸಂಭವಿಸಿದೆ.

​ಸುಚಿತ್ (14) ಹಾಗೂ ಚರಣಕುಮಾರ್ (16) ಮೃತಪಟ್ಟ ದುರ್ದೈವಿ ಬಾಲಕರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ವಿಜಯಕುಮಾರ್ (36) ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ಇನ್ನು ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

​ಚಾಲಕನ ನಿಯಂತ್ರಣ ತಪ್ಪಿದ ವಾಹನ

ಜಹಿರಾಬಾದ್‌ನಿಂದ ನಗರದ ಖಾಸಬಾವಿಗೆ ಗಣೇಶ ಮೂರ್ತಿಯನ್ನು ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಟ್ರ್ಯಾಕ್ಟರ್ ಚಾಲಕ ಆಕಸ್ಮಿಕವಾಗಿ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಒತ್ತಿದ್ದೇ ಈ ಭೀಕರ ದುರಂತಕ್ಕೆ ಕಾರಣ ಎನ್ನಲಾಗಿದೆ.

​ಘಟನೆ ಸಂಬಂಧ ರಾಯಚೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.



image