ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕುಮಾರಿ ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರುತನಿಖೆಗೆ ಆದೇಶಿಸಿರುವುದು ಅತ್ಯಂತ ಸ್ವಾಗತಾರ್ಹ ನಿರ್ಧಾರವಾಗಿದೆ ಎಂದು ಶಾಸಕ ಹರೀಶ್ ಪೂಂಜ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, "14 ವರ್ಷಗಳ ಹಿಂದೆ ನಡೆದ ಈ ಭೀಕರ ಘಟನೆಗೆ ಸಂಬಂಧಿಸಿದಂತೆ ಮರುತನಿಖೆ ಸಂಪೂರ್ಣವಾಗಿ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣಕ್ಕೆ ಸೂಕ್ತ ತಾರ್ಕಿಕ ಅಂತ್ಯ ದೊರೆತು, ಮೃತ ಕುಮಾರಿ ಸೌಜನ್ಯ ಹಾಗೂ ಆಕೆಯ ಕುಟುಂಬಕ್ಕೆ ಕೊನೆಗೂ ಸೂಕ್ತ ನ್ಯಾಯ ಸಿಗುವಂತಾಗಲಿ" ಎಂದು ಆಶಯ ವ್ಯಕ್ತಪಡಿಸಿದ್ದಾರೆ.
